ಧಾರವಾಡದಲ್ಲಿ ‘ಮನೆ ಮನೆಗೆ ಪೋಲೀಸ್’ ಯೋಜನೆ ಕಾರ್ಯಾರಂಭ
ಧಾರವಾಡ, 20 ಜುಲೈ (ಹಿ.ಸ.) : ಆ್ಯಂಕರ್ : ಪೋಲೀಸ್ ಮತ್ತು ಸಾರ್ವಜನಿಕರ ನಡುವಿನ ನಿಕಟ ಸಂಪರ್ಕವನ್ನು ಬೆಳೆಸಲು, ಅಪರಾಧಗಳನ್ನು ತಡೆಗಟ್ಟಲು ಹಾಗೂ ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸರಕಾರ ಪ್ರಾರಂಭಿಸಿರುವ ‘ಮನೆ ಮನೆಗೆ ಪೋಲೀಸ್’ ಎಂಬ ವಿನೂತನ ಕಾರ್ಯಕ್ರಮಕ್ಕೆ ಧಾರವಾಡದಲ್ಲಿ‌ ಚಾಲನೆ ನೀಡ
Police


ಧಾರವಾಡ, 20 ಜುಲೈ (ಹಿ.ಸ.) :

ಆ್ಯಂಕರ್ : ಪೋಲೀಸ್ ಮತ್ತು ಸಾರ್ವಜನಿಕರ ನಡುವಿನ ನಿಕಟ ಸಂಪರ್ಕವನ್ನು ಬೆಳೆಸಲು, ಅಪರಾಧಗಳನ್ನು ತಡೆಗಟ್ಟಲು ಹಾಗೂ ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸರಕಾರ ಪ್ರಾರಂಭಿಸಿರುವ ‘ಮನೆ ಮನೆಗೆ ಪೋಲೀಸ್’ ಎಂಬ ವಿನೂತನ ಕಾರ್ಯಕ್ರಮಕ್ಕೆ ಧಾರವಾಡದಲ್ಲಿ‌ ಚಾಲನೆ ನೀಡಲಾಯಿತು.

ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಮನೆಮನೆಗೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ ಅವರು, ಬಿಟ್ ಪೋಲೀಸರು ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವುದು, ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಕಾರ ನೀಡುವುದೆಂದು ವಿವರಿಸಿದರು.

ಈ ಯೋಜನೆಯಡಿಯಲ್ಲಿ ಪ್ರತಿ ಮನೆಯವರಿಗೆ ಕರಪತ್ರ ವಿತರಿಸಲಾಗಿದ್ದು, ಇದರಲ್ಲಿ ಹಿರಿಯ ಪೋಲೀಸ್ ಅಧಿಕಾರಿಗಳ ಸಂಪರ್ಕ ವಿವರಗಳನ್ನು ನೀಡಲಾಗಿದೆ. ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಡಿ.ವೈಎಸ್.ಪಿ. ವಿನೋದ ಮುಕ್ತೇದಾರ, ಗ್ರಾಮ ಪಂಚಾಯತ್ ಅಧ್ಯಕ್ಷ ವಿಠ್ಠಲ ಬೋವಿ, ಉಪಾಧ್ಯಕ್ಷೆ ಸುಶೀಲಮ್ಮ ಸಾಲಿ, ಹಿರಿಯರು, ಜನಪ್ರತಿನಿಧಿಗಳು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande