ಭಾರತ–ಪಾಕಿಸ್ತಾನ ಡಬ್ಲುಸಿಎಲ್ ಪಂದ್ಯ ರದ್ದು
ನವದೆಹಲಿ, 20 ಜುಲೈ (ಹಿ.ಸ.) : ಆ್ಯಂಕರ್ : ಇಂದು ನಡೆಯಬೇಕಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಭಾರತೀಯ ತಂಡದ ಹಲವು ಆಟಗಾರರು ಈ ಪಂದ್ಯದಿಂದ ಹಿಂದೆ ಸರಿದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಶ್ವ
Match


ನವದೆಹಲಿ, 20 ಜುಲೈ (ಹಿ.ಸ.) :

ಆ್ಯಂಕರ್ : ಇಂದು ನಡೆಯಬೇಕಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಕ್ರಿಕೆಟ್ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಭಾರತೀಯ ತಂಡದ ಹಲವು ಆಟಗಾರರು ಈ ಪಂದ್ಯದಿಂದ ಹಿಂದೆ ಸರಿದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಿಶ್ವ ಚಾಂಪಿಯನ್‌ಶಿಪ್ ಆಯೋಜಕರು ಅಧಿಕೃತ ಹೇಳಿಕೆ ಮೂಲಕ, ಭಾರತೀಯ ಆಟಗಾರರು ಮತ್ತು ಅಭಿಮಾನಿಗಳ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ರದ್ದುಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಆಯೋಜಕರು ಈ ಕುರಿತು ಕ್ಷಮೆಯಾಚನೆಯನ್ನೂ ಪ್ರಕಟಿಸಿದ್ದಾರೆ.

ಈ ಪಂದ್ಯವು ಭಾರತ ತಂಡದ ಡಬ್ಲುಸಿಎಲ್ ಟೂರ್ನಿಯ ಮೊದಲ ಪಂದ್ಯವಾಗಬೇಕಿತ್ತು. ಈಗ ಇಂಡಿಯನ್ ಚಾಂಪಿಯನ್ಸ್ ತಂಡದ ಮುಂದಿನ ಪಂದ್ಯ ಜುಲೈ 22ರಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande