ಕೊಪ್ಪಳ 20 ಜುಲೈ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ವಿವಿಧ ಆಗ್ರೋ ಕೇಂದ್ರಗಳಿಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಭೇಟಿ ನೀಡಿ, ರಸಗೊಬ್ಬರ ಪೂರೈಕೆ ಕುರಿತು ಪರಿಶೀಲಿಸಿದ್ದಾರೆ.
ಯೋಜನೆ ಪ್ರಕಾರ ರಸಗೊಬ್ಬರ ರೈತರಿಗೆ ಮಾರಾಟ ಮಾಡಬೇಕು ಎಂದು ರಸಗೊಬ್ಬರ ಅಂಗಡಿಗಳ ಮಾಲೀಕರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಕೊಪ್ಪಳ ಜಿಲ್ಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಬರುತ್ತಿದ್ದು, ರೈತರು ಯಾವುದೇ ರೀತಿಯ ಆತಂಕಪಡಬೇಕಿಲ್ಲ. ಯೂರಿಯಾ ರಸಗೊಬ್ಬರ ಬಳಕೆಯನ್ನು ರೈತರು ಆದಷ್ಟು ಕಡಿಮೆ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಟಿ. ಎಸ್. ಕೃಷಿ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಸೇರಿದಂತೆ ರಸಗೊಬ್ಬರಗಳ ಅಂಗಡಿಗಳ ಮಾಲೀಕರು ಮತ್ತು ರೈತರು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್