ವಿಜಯಪುರ, 20 ಜುಲೈ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ 2025-26ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್ ಪಾಸ್ ಬುಕ್, ಭಾವಚಿತ್ರದಂತಹ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 30ರೊಳಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಶಿಕಾರಖಾನಾ, ಸ್ಟೇಶನ್ ಬ್ಯಾಕ್ ರೋಡ, ವಿಜಯಪುರ ಇವರನ್ನು ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande