ಮಿಲಿಟರಿ ಶಿಷ್ಯವೇತನ : ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ
ವಿಜಯಪುರ, 20 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ‘ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಿಲಿಟರಿ ಪಿಂಚಣಿ ರಹಿತಿ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲ
ಮಿಲಿಟರಿ ಶಿಷ್ಯವೇತನ : ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ


ವಿಜಯಪುರ, 20 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ‘ಶಾಲಾ-ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಮಿಲಿಟರಿ ಶಿಷ್ಯ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಿಲಿಟರಿ ಪಿಂಚಣಿ ರಹಿತಿ ಕರ್ನಾಟಕದ ಮಾಜಿ ಸೈನಿಕರು ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ನಿಧಿಯಿಂದ 1ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನವನ್ನು ಮತ್ತು ವಿಶೇಷ ನಿಧಿಯಿಂದ ಡಿಗ್ರಿ, ಡಿಪ್ಲೋಮಾ, ಜೆಓಸಿ- ಪ್ರೊಪೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಶಿಷ್ಯ ವೇತನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ದಿನಾಂಕ: 30-11-2025ರೊಳಗಾಗಿ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಕಚೇರಿಗೆ ಅರ್ಜಿ ಸಲ್ಲಿಸಬಹುದು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08352-250913 ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande