ಧಾರವಾಡ, 20 ಜುಲೈ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಜುಲೈ 21 ಮತ್ತು 22 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜುಲೈ ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಪಂಚಯತ ಸಭಾಂಗಣದಲ್ಲಿ 2025-26 ಮೊದಲನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಯೋಜನೆ (ಕೆ.ಡಿ.ಪಿ) ಸಭೆಯನ್ನು ಜರುಗಿಸುವರು.
ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ಅಣ್ಣಿಗೇರಿ ತಾಲೂಕಿನ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯನ್ನು ಜರುಗಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa