ಮಂಡ್ಯ, 20 ಜುಲೈ (ಹಿ.ಸ.) :
ಆ್ಯಂಕರ್ : ಸಚಿವರ ನಡೆ ಗ್ರಾಮ ಪಂಚಾಯಿತಿಯ ಕಡೆ ಎನ್ನುವ ವಿಶೇಷ ಕಾರ್ಯಕ್ರಮದ ಭಾಗವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನಾಗಮಂಗಲ ವಿಧಾನ ಸಭಾ ಕ್ಷೇತ್ರದ ದೇವಲಾಪುರ ಹೋಬಳಿಯ ಭೀಮನಹಳ್ಳಿ ಗ್ರಾಮ ಪಂಚಾಯಿತಿಗೆ ಅಧಿಕಾರಿಗಳೊಂದಿಗೆ ಭೇಟಿನೀಡಿ, ಜನ ಸಂಪರ್ಕ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಜನತೆಯ ಅಹವಾಲುಗಳನ್ನು ಸ್ವೀಕರಿಸಿ, ಅವರ ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಯಿತು. ಇದೇ ವೇಳೆ ಇ-ಸ್ವತ್ತು ಹಾಗೂ ಖಾತಾ ಪತ್ರಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.
ಜಿಲ್ಲಾಧಿಕಾರಿ ಡಾ. ಕುಮಾರ್, ತಹಶೀಲ್ದಾರ್ ಆದರ್ಶ್ ಸಹಿತ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa