ಕರಿಯಪ್ಪ ತಾತನವರ ಜಾತ್ರೆಗೆ ಅಗತ್ಯ ಸಿದ್ಧತೆ : ಬಸನಗೌಡ ದದ್ದಲ್
ರಾಯಚೂರು, 20 ಜುಲೈ (ಹಿ.ಸ.) : ಆ್ಯಂಕರ್ : ನಾಗರ ಪಂಚಮಿಯ ದಿನ ಜುಲೈ 29ರ ಸಂಜೆ 6.30ಕ್ಕೆ ಸಹಸ್ರಾರು ಭಕ್ತರೊಂದಿಗೆ ನಡೆಯುವ ಶ್ರೀ ಕರಿಯಪ್ಪ ತಾತನವರ ಜಾತ್ರಾ ರಥಮಹೋತ್ಸವನ್ನು ಭಕ್ತಿ ಶ್ರದ್ಧೆಯಿಂದ ಶಾಂತಿಯುತವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃ
ಕರಿಯಪ್ಪ ತಾತನವರ ಜಾತ್ರೆಗೆ ಅಗತ್ಯ ಸಿದ್ಧತೆಯಾಗಲಿ: ಬಸನಗೌಡ ದದ್ದಲ್


ರಾಯಚೂರು, 20 ಜುಲೈ (ಹಿ.ಸ.) :

ಆ್ಯಂಕರ್ : ನಾಗರ ಪಂಚಮಿಯ ದಿನ ಜುಲೈ 29ರ ಸಂಜೆ 6.30ಕ್ಕೆ ಸಹಸ್ರಾರು ಭಕ್ತರೊಂದಿಗೆ ನಡೆಯುವ ಶ್ರೀ ಕರಿಯಪ್ಪ ತಾತನವರ ಜಾತ್ರಾ ರಥಮಹೋತ್ಸವನ್ನು ಭಕ್ತಿ ಶ್ರದ್ಧೆಯಿಂದ ಶಾಂತಿಯುತವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಗರದ ಶಾಸಕರ ಕಚೇರಿಯಲ್ಲಿ ಶ್ರೀ ಕರಿಯಪ್ಪ ತಾತನವರ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.

ಶ್ರೀ ಕರಿಯಪ್ಪ ತಾತನವರ ಜಾತ್ರೆಯು ನಮ್ಮ ಭಾಗದಲ್ಲಿ ವಿಶೇಷವಾಗಿ ನಡೆಯುತ್ತದೆ. ಈ ಜಾತ್ರೆಗೆ ರಾಜ್ಯದ ಬೇರೆ ಬೇರೆ ಭಾಗದ ಜನರು ಸೇರಿದಂತೆ ಅಂತಾರಾಜ್ಯದ ಜನರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಯಾವುದೇ ರೀತಿಯ ತೊಂದರೆಗಳು ಆಗದ ಹಾಗೆ ಈಗಿನಿಂದಲೇ ಅಧಿಕಾರಿಗಳು ಸಿದ್ಧತಾ ಕಾರ್ಯ ಮಾಡಬೇಕು.

ದೇವಸ್ಥಾನದ ಆವರಣದಲ್ಲಿ ಮತ್ತು ಸುತ್ತಲು ಶುಚಿತ್ವಕ್ಕೆ ಗಮನ ಕೊಡಬೇಕು. ರಥದ ಬೀದಿಯನ್ನು ಸರಿಯಾಗಿ ಸಿದ್ಧಪಡಿಸಬೇಕು. ಭಕ್ತರಿಗೆ ಶುದ್ಧವಾದ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಜನರ ಸುರಕ್ಷತೆ ದೃಷ್ಟಿಯಿಂದ ಬ್ಯಾರಿಕೇಡ್ ಬಳಸಬೇಕು. ಮತ್ತು ಇನ್ನೀತರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಆದೇಶಿಸಿದರು.

ಜಾತ್ರೋತ್ಸವ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ಸರಿಯಾಗಿ ಆಗಬೇಕು. ಅಂಬುಲೆನ್ಸ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ವೈದ್ಯಕೀಯ ಚಿಕಿತ್ಸೆಗೆ ಏರ್ಪಾಡು ಮಾಡಬೇಕು ಭಕ್ತರಿಗೆ ಜಾತ್ರೆಗೆ ಬರಲು ಬಸ್ಸಿನ ಸೌಕರ್ಯ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಶಾಸಕರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮಸ್ಥರಿಂದ ಸಲಹೆ: ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಸ್ಥರು, ನಾಮ ನಿರ್ದೇಶನ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಸಭೆಯಲ್ಲಿ ಭಾಗಿಯಾಗಿ ನಾನಾ ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಪೆÇೀಲಿಸ್ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಜೆಸ್ಕಾಂ ಇಲಾಖೆ, ಅಬಕಾರಿ ಇಲಾಖೆ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande