ಶಿವಮೊಗ್ಗ, 20 ಜುಲೈ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 'ಆರೈಕೆ ಅಂಧತ್ವ ಮುಕ್ತ ಶಿವಮೊಗ್ಗ' ಅಭಿಯಾನ ಕಾರ್ಯಕ್ರಮ ನಾಳೆ ಮಧ್ಯಾಹ್ನ 2 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಾಸಕರು ಬಿ.ಕೆ. ಸಂಗಮೇಶ್, ಗೋಪಾಲಕೃಷ್ಣ ಬೇಳೂರು, ಸಂಸದ ಬಿ.ವೈ. ರಾಘವೇಂದ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಶಾಸಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಗೃಹ ಆರೋಗ್ಯ ಯೋಜನೆ ಕುರಿತ ಕಾರ್ಯಾಗಾರ ಹಾಗೂ ಆಶಾ ಕಾರ್ಯಕರ್ತರ ಕೈಪಿಡಿ ಬಿಡುಗಡೆ ನಡೆಯಲಿದೆ. ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa