ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ, 20 ಜುಲೈ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ್ರ.ಜಾ/ಪ್ರ.ವರ್ಗದ ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವ
ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ


ಶಿವಮೊಗ್ಗ, 20 ಜುಲೈ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ್ರ.ಜಾ/ಪ್ರ.ವರ್ಗದ ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್ ಮೂಲಕ ದಿ: 14/08/2025 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.inನ್ನು ಸಂಪರ್ಕಿಸಿ, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಅಥವಾ ಸಹಾಯವಾಣಿ ಸಂ. 8050770004/ 8050770005 ಗಳನ್ನು ಸಂಪರ್ಕಿಸುವುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande