ನವದೆಹಲಿ, 20 ಜುಲೈ (ಹಿ.ಸ.) :
ಆ್ಯಂಕರ್ : ಜುಲೈ 21 ರಿಂದ ಆಗಸ್ಟ್ 21 ರವರೆಗೆ ನಡೆಯಲಿರುವ ಸಂಸತ್ತಿನ ಮಳೆಗಾಲ ಅಧಿವೇಶನಕ್ಕೂ ಮುನ್ನ, ಇಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.
ಸಂಸತ್ ಭವನದ ಅನೆಕ್ಸ್‌ನಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಹಿಸಲಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ಹಿರಿಯ ಸಚಿವರು ಹಾಗೂ ಪ್ರತಿ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಅಧಿವೇಶನದಲ್ಲಿ ಒಟ್ಟು 21 ಸಭೆಗಳು ನಡೆಯಲಿದ್ದು, ಸರ್ಕಾರ 8 ಹೊಸ ಮಸೂದೆಗಳನ್ನು ಮಂಡಿಸಲು ಯೋಜಿಸಿದೆ. ಪಹಲ್ಗಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ ಅಧಿವೇಶನ ಗದ್ದಲದ ನಡುವೆ ನಡೆಯುವ ಸಾಧ್ಯತೆ ಇದೆ. ಸರ್ಕಾರವು ಸದನದ ಸುಗಮ ಕಾರ್ಯನಿರ್ವಹಣೆಗೆ ಎಲ್ಲ ಪಕ್ಷಗಳ ಸಹಕಾರವನ್ನು ಕೋರಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa