ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು, 20 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು‌ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗ
Rain alert


ಬೆಂಗಳೂರು, 20 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು‌ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು ಕೆಂಪು ಎಚ್ಚರಿಕೆ ನೀಡಲಾಗಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ನೀಲಾಗಿದ್ದು ಉಳಿದ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಹಾಗೂ ಸ್ಥಳೀಯ ಆಡಳಿತಗಳು ತುರ್ತು ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande