ಶಿಷ್ಯವೇತನ : ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ
ವಿಜಯಪುರ, 20 ಜುಲೈ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ, ಪದವಿ ಹಾಗೂ ವೃತ್ತಿಪರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮ
ಶಿಷ್ಯವೇತನ : ಮಾಜಿ ಸೈನಿಕ ಮಕ್ಕಳಿಂದ ಅರ್ಜಿ ಆಹ್ವಾನ


ವಿಜಯಪುರ, 20 ಜುಲೈ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ, ಪದವಿ ಹಾಗೂ ವೃತ್ತಿಪರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ, ಪದವಿ ಹಾಗೂ ವೃತ್ತಿಪರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಶುಲ್ಕ ರಹಿತ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ:30-09-2025ರೊಳಗಾಗಿ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 08352-250913 ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande