ಅಂಕೋಲಾ, 21 ಜುಲೈ (ಹಿ.ಸ.):
ಆ್ಯಂಕರ್:
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಅಂಕೋಲ ತಾಲೂಕಿನ ಅಗಸೂರು ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಟ್ಟು 18 ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಬಸ್ ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತನ ಗುರುತು ಪತ್ತೆಯಾಗಬೇಕಿದೆ.
ಅಂಕೋಲ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa