ರಾಯಚೂರು, 21 ಜುಲೈ (ಹಿ.ಸ.) :
ಆ್ಯಂಕರ್ : ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಸತಿ ನಿಲಯಕ್ಕೆ ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಸತಿ ನಿಲಯಗಳಿಗೆ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, ಎಎಸ್.ಸಿ & ಎಸ್,ಟಿ 2.50 ಲಕ್ಷಹಾಗೂ ಪ್ರವರ್ಗ-2ಎ, 2ಬಿ, 3ಎ 3ಬಿ ಇತರೇ ಹಿಂದುಳಿದ ವರ್ಗ ವಿದ್ಯಾರ್ಥಿಗಳ ವಾರ್ಷಿಕ ಆದಾಯವು 1 ಲಕ್ಷ ರೂ.ಗಳುಯೊಳಗೆ ಇರಬೇಕು.
ಆಸಕ್ತರು https://shp.karnataka.gov.in ನಲ್ಲಿ ಆಗಸ್ಟ್ 14 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತಾಲೂಕುವಾರು ವಿದ್ಯಾರ್ಥಿಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://shp.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ: bcw.hostels@karnataka.gov.in ಗೆ ಇ-ಮೇಲ್ ಮುಂಖಾಂತರ ಅಥವಾ ತಾಲೂಕ ಕಲ್ಯಾಣಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಾಯಚೂರು ದೂರವಾಣಿ ಸಂ: 08532-221072ಗೆ ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿ.ಜಿ ಕುಲ್ಕರ್ಣಿ ಅಸ್ಪತ್ರೆ ಹತ್ತಿರ ಅನೀರಿಕ್ಷಿತ ಮನೆ ಅಜಾದ್ ನಗರ ಕಾಲೋನಿ ರಾಯಚೂರು. ದೂರವಾಣಿ ಸಂಖ್ಯೆ : 08532-221072ಗೆ ಸಂಪರ್ಕ ಮಾಡಬಹುದಾಗಿದೆ ಎಂದು ತಾಲೂಕು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್