ಬಳ್ಳಾರಿ, 21 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯ ಪೊಲೀಸ್ ಠಾಣೆಗಳ ಸರಹದ್ದು (ಬೌಂಡರಿ)ಯನ್ನು ಮರು ನಿಗದಿ ಮಾಡಿ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.
ಬಳ್ಳಾರಿ ನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯ ಹಲವು ಪ್ರದೇಶಗಳು - ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿದ್ದವು. ಗ್ರಾಮೀಣ ಪೊಲೀಸ್ ಠಾಣೆ, ಕೌಲಬಜಾರ್ ಠಾಣೆ ಹಾಗೂ ವಿವಿಧ ಠಾಣೆಗಳ ವ್ಯಾಪ್ತಿಗೆ ನಗರ ಕ್ಷೇತ್ರದ ಪ್ರದೇಶಗಳು ಸೇರಿದ್ದವು. ಈ ಕಾರಣಕ್ಕಾಗಿ ಸಾರ್ವಜನಿಕರು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಅನೇಕ ಸಂದರ್ಭಗಳಲ್ಲಿ ಗೊಂದಲಕ್ಕೀಡಾಗುತ್ತಿದ್ದರು.
ಈ ಕಾರಣಕ್ಕಾಗಿ ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತರೆಡ್ಡಿ ಅವರು ಗೃಹ ಇಲಾಖೆಯ ಜೊತೆ ಪತ್ರ ವ್ಯವಹಾರ ನಡೆಸಿ, ಹಳೆಯ ಸರಹದ್ದುಗಳನ್ನು ಪುನರ್ ನಿಗದಿ ಮಾಡಿಸಿ, ಜನಪರವಾದ ಕಾರ್ಯವನ್ನು ಕೈಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್