ಬಳ್ಳಾರಿ : ಆದರ್ಶ ಶಾಲೆಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಬಳ್ಳಾರಿ, 21 ಜುಲೈ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ಕೌಲ್ ಬಜಾರ್ ಪ್ರದೇಶದ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಸೋಮವಾರ ಭೇಟಿ ನೀಡಿ, ಶಾಲೆಯ ಕಾಂಪೌಂಡ್, ಕಟ್ಟಡ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದ್ದಾರೆ. ಜಿಲ್
ಬಳ್ಳಾರಿ : ಜಿಲ್ಲಾಧಿಕಾರಿಗಳು ಆದರ್ಶ ಶಾಲೆಗೆ ಭೇಟಿ, ಪರಿಶೀಲನೆ


ಬಳ್ಳಾರಿ, 21 ಜುಲೈ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು ಕೌಲ್ ಬಜಾರ್ ಪ್ರದೇಶದ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಸೋಮವಾರ ಭೇಟಿ ನೀಡಿ, ಶಾಲೆಯ ಕಾಂಪೌಂಡ್, ಕಟ್ಟಡ, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರಾ ಅವರು, 7, 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಕಲಿಕಾ ಗುಣಮಟ್ಟವನ್ನು ಪರಿಶೀಲಿಸಿ, ಅನೇಕ ಸಲಹೆ - ಸೂಚನೆಗಳನ್ನು ನೀಡಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತ ಚರಕುಂಟೆ, ಸದಸ್ಯರಾದ ರಾಧ, ಪುಟ್ಟ ರಂಗೇಗೌಡ ಮಲ್ಲಯ್ಯ ಮತ್ತು ಶಾಲಾ ಮುಖ್ಯ ಉಪಾಧ್ಯಾಯರು, ಶಿಕ್ಷಕರು ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande