ಬೆಂಗಳೂರು, 21 ಜುಲೈ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳ ಪ್ರಕರಣದ ಕುರಿತು ಎಸ್ ಐಟಿ ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲ ಮಿತಿಯಲ್ಲಿ ಕಾನೂಬದ್ದವಾಗಿ ಎಸ್ ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ. ದೂರು ಕೊಟ್ಟವರಿಗೆ ಯಾರು ಒತ್ತಡ ಹಾಕಿದ್ದಾರೆ ಎಂದು ಹೇಳಬೇಕು, ಈ ಬಗ್ಗೆ ತನಿಖೆಯಾಗಬೇಕು. ಅಲ್ಲಿ ನಡೆದಿರುವ ಪ್ರಕರಣದ ಬಗ್ಗೆ ಪೊಲಿಸರು ಕ್ರಮ ಕೈಗೊಳ್ಳಬೇಕು. ಧರ್ಮಸ್ಥಳ ಪುರಾತನ ಹಾಗೂ ನಂಬಿಕೆಗೆ ಹೆಸರಾಗಿರುವ ದೇವಸ್ಥಾನ, ಆ ದೇವಸ್ಥಾನದ ಮೇಲಿನ ಜನರ ನಂಬಿಕೆ ಕೆಡಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa