ಬಳ್ಳಾರಿ, 21 ಜುಲೈ (ಹಿ.ಸ.) :
ಆ್ಯಂಕರ್ : ಪ್ರಸ್ತಕ ಸಾಲಿನಲ್ಲಿ ಕೇಂದ್ರ ಸರ್ಕಾರವು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲೆಯ ವ್ಯಕ್ತಿ ಮತ್ತು ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
2 ಪಾಸ್‍ಪೋರ್ಟ್ ಭಾವಚಿತ್ರ (ವೈಯಕ್ತಿಕ ವಿಭಾಗ), ಅರ್ಜಿದಾರರ ವ್ಯಕ್ತಿ ಮತ್ತು ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆ, ಡ್ರಾಫ್ಟ್ ಸೈಟೇಷನ್(1 ಪುಟಕ್ಕೆ ಮೀರದಂತೆ) ಹಾಗೂ ಇತರೆ ದಾಖಲೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು www.awards.gov.in ಅಥವಾ www.depwd.gov.in ವೆಬ್-ಸೈಟ್ ಗೆ ಭೇಟಿ ನೀಡಬಹುದು.
ಆನ್‍ಲೈನ್‍ನಲ್ಲಿ ತಮ್ಮ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳ ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್