ಅಭಿವೃದ್ಧಿ ಇಲ್ಲದೆ ಗ್ರೇಟರ್‌ ಬೆಂಗಳೂರು ಪ್ರಸ್ತಾಪ : ಅಶೋಕ
ಬೆಂಗಳೂರು, 21 ಜುಲೈ (ಹಿ.ಸ.) : ಆ್ಯಂಕರ್ : ಗ್ರೇಟರ್‌ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರ
Ashok


ಬೆಂಗಳೂರು, 21 ಜುಲೈ (ಹಿ.ಸ.) :

ಆ್ಯಂಕರ್ : ಗ್ರೇಟರ್‌ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ. ಕಾಂಗ್ರೆಸ್‌ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ. ಬೆಂಗಳೂರನ್ನು ವಿಭಜನೆ ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನ ಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande