ಗದಗ, 21 ಜುಲೈ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜನೀಯರಿಂಗ್ ಘಟಕ, ತಾಲೂಕಾ ಆರೋಗ್ಯ ಅಧಿಕಾರಿಗಳು, ಶಿರಹಟ್ಟಿ,ಪ್ರಾಥಮಿಕ ಆರೋಗ್ಯ ಕೇಂದ್ರ, ಬಾಲೆ ಹೊಸೂರು ಇವರ ಸಂಯುಕ್ತ ಆಶ್ರಯದಲ್ಲಿ ವೈದ್ಯಾಧಿಕಾರಿಗಳ ಹಾಗೂ ಸಿಬ್ಬಂದಿಗಳ ವಸತಿ ಗೃಹ ಉದ್ಘಾಟನೆ ಕಾರ್ಯಕ್ರಮವನ್ನು ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ಶಿರಹಟ್ಟಿ ತಾಲೂಕು ಆಸ್ಪತ್ರೆಯ ನೂತನ ಜಾಗೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರುಗಳು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸುವರು.
ಶಿರಹಟ್ಟಿ ವಿಧಾನ ಸಭೆ ಶಾಸಕ ಡಾ. ಚಂದ್ರು ಲಮಾಣಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ಬಾಲೆಹೊಸೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚನ್ನವ್ವ ಕೆಂಚಪ್ಪ ಮೈಲಾರಿ, ಶಿರಹಟ್ಟಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ವೀರಯ್ಯ ಮಠಪತಿ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ, ಕನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಶಿವಕುಮಾರ್ ಕೆ.ಬಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ , ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ.ಅವಿನಾಶ ಮೆನನ್ ರಾಜೇಂದ್ರನ್ , ಜಿ.ಪಂ. ಮುಖ್ಯ ಕಾರ್ಯನಿರ್ವಹಣಾದಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರೋಹನ್ ಜಗದೀಶ್ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ.ವಸಂತ ಕುಮಾರ ಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನೀಯರಿಂಗ ಘಟಕದ ಮುಖ್ಯ ಅಭಿಯಂತರ ಮುಕ್ಕಣ್ಣ ನಾಯಕ, ಬೆಳಗಾವಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕ ಶ್ರೀಮತಿ ಡಾ. ಪುಷ್ಪಾ ಎಚ್.ಆರ್, ಆಗಮಿಸುವರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಭಾಷ್ ಎಸ್ ದೈಗೊಂಡ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ವಿಭಾಗ ಕಾರ್ಯ ನಿರ್ವಾಹಕ ಅಭಿಯಂತರರಾದ ಮಾಂತೇಶ ಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮಲ್ಲಿಕಾರ್ಜುನ ಕೊಕಟನೂರ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Lalita Manjunath Pattar