ಶ್ರೀನಗರ, 21 ಜುಲೈ (ಹಿ.ಸ.):
ಆ್ಯಂಕರ್:
ಜಮ್ಮು ಮತ್ತು ಕಾಶ್ಮೀರದ ಕತ್ರಾದ ವೈಷ್ಣೋದೇವಿ ಯಾತ್ರಾಮಾರ್ಗದಲ್ಲಿ ಭಾರೀ ಮಳೆಗೆ ಭೂಕುಸಿತ ಉಂಟಾಗಿ ನಾಲ್ವರು ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ.
ಯಾತ್ರೆಯ ಪ್ರಾರಂಭಿಕ ಬಂಗಂಗಾ ಪ್ರದೇಶದ ಬಳಿ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಭೂಕುಸಿತ ಸಂಭವಿಸಿದ್ದು, ಹಲವಾರು ಯಾತ್ರಿಕರು ಮಣ್ಣಿನ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ.
ಪ್ರಸ್ತುತ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಿರಂತರ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಗುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa