ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗಲಿದ್ದಾರೆ : ರಾಯರೆಡ್ಡಿ
ಹುಬ್ಬಳ್ಳಿ, 21 ಜುಲೈ (ಹಿ.ಸ.) : ಆ್ಯಂಕರ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಕೆಲ ತಿಂಗಳಲ್ಲಿ ದೇಶದ ಪ್ರಧಾನಮಂತ್ರಿಯಾಗಬಹುದೆಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಭವಿಷ್ಯ ನುಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿ ನಾಯ
Rayreddy


ಹುಬ್ಬಳ್ಳಿ, 21 ಜುಲೈ (ಹಿ.ಸ.) :

ಆ್ಯಂಕರ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಕೆಲ ತಿಂಗಳಲ್ಲಿ ದೇಶದ ಪ್ರಧಾನಮಂತ್ರಿಯಾಗಬಹುದೆಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಭವಿಷ್ಯ ನುಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿ ನಾಯಕರು ಖರ್ಗೆಯವರ ಬಗ್ಗೆ ವ್ಯಂಗ್ಯವಾಗಿ ಮಾತನಾಡುತ್ತಿದ್ದಾರೆ. ನಾನು ಸುಮ್ಮನೆ ಈ ಮಾತು ಹೇಳಿಲ್ಲ. ಖರ್ಗೆ ಪ್ರಧಾನಿಯಾದರೂ ಆಶ್ಚರ್ಯವಿಲ್ಲ” ಎಂದು ಹೇಳಿದರು.

“ಅವರು ಚುನಾಯಿತ ಎಐಸಿಸಿ ಅಧ್ಯಕ್ಷರಾಗಿದ್ದು, ಹಿರಿಯ ದಲಿತ ನಾಯಕರು. ಪ್ರಧಾನಿಯಾಗುವ ಅರ್ಹತೆ ಮತ್ತು ಸಾಮರ್ಥ್ಯ ಖರ್ಗೆ ಹೊಂದಿದ್ದಾರೆ” ಎಂದು ರಾಯರೆಡ್ಡಿ ಹೇಳಿದರು.

ಮೋದಿ ಅವರ 75ನೇ ವಯಸ್ಸು ಮುಟ್ಟುತ್ತಿದ್ದರೆ, ಆರ್‌ಎಸ್‌ಎಸ್ ಮಾರ್ಗದರ್ಶಿಗಳ ಪ್ರಕಾರ ಅವರು ಅಧಿಕಾರದಿಂದ ಹಿಂದೆ ಸರಿಯಬಹುದೆಂದು ಅವರು ಅಭಿಪ್ರಾಯಪಟ್ಟರು. ಈ ವೇಳೆ ಕಾಂಗ್ರೆಸ್‌ಗೆ ಅಧಿಕಾರಕ್ಕೆ ಬರುವ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ರಾಜ್ಯ ರಾಜಕಾರಣದ ಕುರಿತು ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ ಎರಡು ವರ್ಷ ಹತ್ತು ತಿಂಗಳು ಅಧಿಕಾರದಲ್ಲಿ ಮುಂದುವರಿಯುತ್ತಾರೆ. ಯಾವುದೇ ಬದಲಾವಣೆ ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande