ಬಳ್ಳಾರಿ, 21 ಜುಲೈ (ಹಿ.ಸ.) :
ಆ್ಯಂಕರ್ : ಮುಂಗಾರು ಕೃಷಿ ನಡೆಸಲು ರೈತರಿಗೆ ಅನುಕೂಲವಾಗಲಿಕ್ಕಾಗಿ ಜೋಳ ಖರೀದಿ ಕೇಂದ್ರದಲ್ಲಿ ಜೋಳ ಖರೀದಿಸಿರುವ ಸರ್ಕಾರ ಫಲಾನುಭವಿಗಳ ಖಾತೆಗೆ ಹಣವನ್ನು ಶೀಘ್ರವೇ ಪಾವತಿಸಲು ಕೋರಿ ಕನ್ನಡನಾಡು ರೈತ ಸಂಘ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಕನ್ನಡನಾಡು ರೈತ ಸಂಘದ ಅಧ್ಯಕ್ಷ ಈಶ್ವರಪ್ಪ ಮೆಣಸಿನ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತರು, ಸರ್ಕಾರ ಜೋಳವನ್ನು ಖರೀದಿಸಿ ಮೂರು ತಿಂಗಳಾದರೂ ಹಣ ಪಾವತಿಸಿಲ್ಲ. ಮುಂಗಾರು ಕೃಷಿ ಚಟುವಟಿಕೆಗಳು ಪ್ರಾರಂಭಿಸುವ ಕಾರಣ ಸರ್ಕಾರ ತಕ್ಷಣವೇ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಕನ್ನಡನಾಡು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಜಿ. ದೊಡ್ಡಬಸನಗೌಡ ಇನ್ನಿತರರು ಈ ಸಂದರ್ಭದಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್