ವಿದ್ಯಾರ್ಥಿಗಳಿಗೆ ವೃತ್ತಿಪರ ತರಬೇತಿ : ಅರ್ಜಿ ಆಹ್ವಾನ
ಬಳ್ಳಾರಿ, 21 ಜುಲೈ (ಹಿ.ಸ.) : ಆ್ಯಂಕರ್ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಹೋಟಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‍ಲೈನ್
ವಿದ್ಯಾರ್ಥಿಗಳಿಗೆ ವೃತ್ತಿಪರ ತರಬೇತಿ : ಅರ್ಜಿ ಆಹ್ವಾನ


ಬಳ್ಳಾರಿ, 21 ಜುಲೈ (ಹಿ.ಸ.) :

ಆ್ಯಂಕರ್ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಹೋಟಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯನ್ನು ಬೆಂಗಳೂರಿನ ಇನ್‍ಸ್ಟಿಟ್ಯೂಟ್ ಆಫ್ ಹೋಟಲ್ ಮ್ಯಾನೇಜ್‍ಮೆಂಟ್ ನಲ್ಲಿ ನೀಡಲಾಗುತ್ತಿದ್ದು, ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 02 ಕೊನೆಯ ದಿನವಾಗಿದೆ.

ಮಾಹಿತಿಗಾಗಿ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಮೊ.9611342523 ಹಾಗೂ ತಾಲೂಕು ಮಾಹಿತಿ ಕೇಂದ್ರ: ಬಳ್ಳಾರಿ-8310321101, ಸಂಡೂರು-9036925966/ 8660575061, ಸಿರುಗುಪ್ಪ-9148889975 ಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಮತ್ತು ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande