ಉಪ ರಾಷ್ಟ್ರಪತಿ ಧಂಖರ್ ರಾಜೀನಾಮೆ ಅಂಗೀಕಾರ
ನವದೆಹಲಿ, 22 ಜುಲೈ (ಹಿ.ಸ.) : ಆ್ಯಂಕರ್ : ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಶುಭಾಶಯಗಳನ್ನು ಪ್ರಕಟಿಸಿದ್ದಾರೆ. ಸೋಮವಾರ ಧಂಖರ್ ಅವರು ಆರೋಗ್
Accept


ನವದೆಹಲಿ, 22 ಜುಲೈ (ಹಿ.ಸ.) :

ಆ್ಯಂಕರ್ : ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಶುಭಾಶಯಗಳನ್ನು ಪ್ರಕಟಿಸಿದ್ದಾರೆ.

ಸೋಮವಾರ ಧಂಖರ್ ಅವರು ಆರೋಗ್ಯ ಕಾರಣ ನೀಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಈ ಕುರಿತು ಗೃಹ ಸಚಿವಾಲಯವು ಭಾರತೀಯ ಸಂವಿಧಾನದ 67A ವಿಧಿಯ ಅಡಿಯಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ, “ಜಗದೀಪ್ ಧಂಖರ್ ಅವರಿಗೆ ಭಾರತದ ಉಪರಾಷ್ಟ್ರಪತಿ ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳಲ್ಲಿ ದೇಶದ ಸೇವೆ ಮಾಡುವ ಅವಕಾಶ ಸಿಕ್ಕಿದೆ. ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ಉಜ್ವಲ ಭವಿಷ್ಯವನ್ನು ಹಾರೈಸುತ್ತೇನೆ,” ಎಂದು ತಿಳಿಸಿದ್ದಾರೆ.

ಸಂಸತ್ತಿನ ಮಳೆಗಾಲ ಅಧಿವೇಶನ ಆರಂಭವಾಗುತ್ತಿರುವ ಸಂದರ್ಭದಲ್ಲೇ ಧಂಖರ ರಾಜೀನಾಮೆ ಸುದ್ದಿಯಾಗಿದ್ದು, ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಈಗಾಗಲೇ ಅವರ ಉತ್ತರಾಧಿಕಾರಿಯ ಬಗ್ಗೆ ರಾಜಕೀಯ ಸಮಾಲೋಚನೆಗಳು ಮತ್ತು ಊಹಾಪೋಹಗಳು ಆರಂಭವಾಗಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande