ಬಳ್ಳಾರಿ ಆದರ್ಶ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಭೇಟಿ
ಬಳ್ಳಾರಿ, 22 ಜುಲೈ (ಹಿ.ಸ.) : ಆ್ಯಂಕರ್ : ನಗರದ ಹಿರಾಳ್‍ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯ 7, 9 ಮತ್ತು 10ನೇ ತರಗತಿಯಲ್ಲಿ ಮಕ್ಕಳ ಕಲಿಕಾ ಗುಣಮಟ್ಟವನ್ನು ಪರಿಶೀಲಿಸಿ ಮಾರ್ಗದರ್ಶನ ನೀಡಿದ ಅವರು
ಬಳ್ಳಾರಿ : ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ


ಬಳ್ಳಾರಿ : ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ


ಬಳ್ಳಾರಿ : ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ


ಬಳ್ಳಾರಿ, 22 ಜುಲೈ (ಹಿ.ಸ.) :

ಆ್ಯಂಕರ್ : ನಗರದ ಹಿರಾಳ್‍ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಾಲೆಯ 7, 9 ಮತ್ತು 10ನೇ ತರಗತಿಯಲ್ಲಿ ಮಕ್ಕಳ ಕಲಿಕಾ ಗುಣಮಟ್ಟವನ್ನು ಪರಿಶೀಲಿಸಿ ಮಾರ್ಗದರ್ಶನ ನೀಡಿದ ಅವರು ಶಾಲೆಯ ಕಾಂಪೌಂಡ್ ಸಮಸ್ಯೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಪರಿಹಾರ ಕ್ರಮ ವಹಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಸತ್ಯನಾರಾಯಣ ಸೇರಿದಂತೆ ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಇತರರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande