ಬಳ್ಳಾರಿ, 22 ಜುಲೈ (ಹಿ.ಸ.) :
ಆ್ಯಂಕರ್ : ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಲಬುರ್ಗಿ ಜಿಲ್ಲೆಯ ಚಿಂಚೋಳ್ಳಿ ತಾಲ್ಲೂಕಿನ ಸಲಗರ ಬಸಂತಪುರ ಗ್ರಾಮದ ರಾಹುಲ್(24) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಉಪ-ನಿರೀಕ್ಷಕರು ತಿಳಿಸಿದ್ದಾರೆ.
ಚಹರೆ: 5.8 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ತೆಳ್ಳನೇಯ ಮೈಕಟ್ಟು, ಕಪ್ಪು ಕೂದಲು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಟೀ-ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಬಿಳಿಯ ಕನ್ನಡಕ ಹಾಕಿರುತ್ತಾನೆ.
ಯುವಕ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ದೂ.08392-276063, ಮೊ.9480802131 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್