ಡಿ.ಕೆ ಶಿವಕುಮಾರ್ ಅನಾರೋಗ್ಯ ; ಮೂರು ದಿನ ಸಾರ್ವಜನಿಕ ಭೇಟಿ ರದ್ದು
ಬೆಂಗಳೂರು, 22 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕ ಭೇಟಿ ಹಾಗೂ ಸಭೆ ಸಮಾರಂಭಗಳನ್ನು ರದ್ದುಗೊಳಿಸಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣ
Dk


ಬೆಂಗಳೂರು, 22 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕ ಭೇಟಿ ಹಾಗೂ ಸಭೆ ಸಮಾರಂಭಗಳನ್ನು ರದ್ದುಗೊಳಿಸಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಣೆ ಹೊರಡಿಸಿದ್ದು, ಮೂರು ದಿನ ಯಾರನ್ನೂ ಭೇಟಿ ಮಾಡಲಾಗುವುದಿಲ್ಲ. ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಈ ಕುರಿತು ತಪ್ಪು ಅರ್ಥೈಸಬಾರದು ಎಂದು ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಆರೋಗ್ಯದ ಕುರಿತು ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ಆರೋಗ್ಯ ವಿಚಾರಿಸಿದ್ದು, ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಜುಲೈ 16ರಿಂದಲೇ ಜ್ವರದಿಂದ ಬಳಲುತ್ತಿರುವ ಡಿ.ಕೆ. ಶಿವಕುಮಾರ್, ಆ ದಿನದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದರು. ಈಗ ಮತ್ತೆ ವಿಶ್ರಾಂತಿಗೆ ತಿರುಗಿದ್ದಾರೆ. ಮುಂದಿನ ಮೂರು ದಿನಗಳ ಕಾಲ ಅವರು ಯಾವುದೇ ಸಭೆ-ಸಮಾರಂಭ, ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಿಲ್ಲ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande