ಹುಬ್ಬಳ್ಳಿ, 22 ಜುಲೈ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿಗಳ ಆದೇಶ ಮೇರೆಗೆ ಕಳೆದ 2 ವರ್ಷಗಳಿಂದ ಜನತಾ ದರ್ಶನ ಸಭೆ ಮಾಡಿದ್ದೇವೆ. ಜನರಿಗೆ ನೇರವಾಗಿ ಕಾನೂನಾತ್ಮಕ ಚೌಕಟ್ಟಿನಲ್ಲಿ ಸಾರ್ವಜನಿಕರ ಸಮಸ್ಯೆ, ಅಹವಾಲುಗಳನ್ನು ಕಾಲಮಿತಿಯಲ್ಲಿ ಮತ್ತು ಸಾಧ್ಯವಾದಷ್ಟು ಸ್ಥಳಿಯವಾಗಿ ಪರಿಹರಿಸಲು ಅನಕೂಲವಾಗುವಂತೆ ಎಲ್ಲಾ ಅಧಿಕಾರಿಗಳಿಗೆ ಆದೇಶ ನೀಡುಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಜಿಲ್ಲಾಡಳಿತ, ಅಣ್ಣಿಗೇರಿ ತಾಲೂಕಾಡಳಿತ, ತಾಲೂಕು ಪಂಚಾಯತ ಹಾಗೂ ಪುರಸಭೆ ಸಹಯೋಗದೊಂದಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಜಿಲ್ಲಾಡಳಿತ ನಿರಂತರವಾಗಿ ಸಾರ್ವಜನಿಕರ ಅಹವಾಲು, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಪರಿಹರಿಸಲು ಕ್ರಮವಹಿಸುತ್ತಿದೆ. ಜಿಲ್ಲೆಯ ಎಲ್ಲ ತಹಸೀಲ್ದಾರರು ಪ್ರತಿ ದಿನ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಕ್ರಮವಹಿಸುತ್ತಿದ್ದಾರೆ. ಜಿಲ್ಲಾಡಳಿತದಿಂದ ಸಾರ್ವಜನಿಕರ ಆಶಯಗಳಿಗೆ ತಕ್ಷಣ ಪ್ರತಿಕ್ರಿಯಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa