ಎಲ್ಲ ಸಮಸ್ಯೆಗಳಿಗೂ ಶಿಕ್ಷಣವೊಂದೇ ಪರಿಹಾರ : ನ್ಯಾ.ಹೆಚ್.ಎ.ಸಾತ್ವಿಕ್
ರಾಯಚೂರು, 22 ಜುಲೈ (ಹಿ.ಸ.) : ಆ್ಯಂಕರ್ : ಜೀವನದಲ್ಲಿ ಸಾಮಾನ್ಯವಾಗಿ ಪ್ರತಿಯೊಬ್ಬರು ಎದುರಿಸುವ ಎಲ್ಲ ಸಮಸ್ಯೆಗಳಿಗೂ ಉತ್ತಮ ಶಿಕ್ಷಣವೊಂದೇ ಪರಿಹಾರ ಆಗಬಲ್ಲದು ಎಂದು ಗೌರವಾನ್ವಿತ ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.
ಎಲ್ಲ ಸಮಸ್ಯೆಗಳಿಗೂ ಶಿಕ್ಷಣವೊಂದೇ ಪರಿಹಾರ: ನ್ಯಾ.ಹೆಚ್.ಎ.ಸಾತ್ವಿಕ್


ಎಲ್ಲ ಸಮಸ್ಯೆಗಳಿಗೂ ಶಿಕ್ಷಣವೊಂದೇ ಪರಿಹಾರ: ನ್ಯಾ.ಹೆಚ್.ಎ.ಸಾತ್ವಿಕ್


ರಾಯಚೂರು, 22 ಜುಲೈ (ಹಿ.ಸ.) :

ಆ್ಯಂಕರ್ : ಜೀವನದಲ್ಲಿ ಸಾಮಾನ್ಯವಾಗಿ ಪ್ರತಿಯೊಬ್ಬರು ಎದುರಿಸುವ ಎಲ್ಲ ಸಮಸ್ಯೆಗಳಿಗೂ ಉತ್ತಮ ಶಿಕ್ಷಣವೊಂದೇ ಪರಿಹಾರ ಆಗಬಲ್ಲದು ಎಂದು ಗೌರವಾನ್ವಿತ ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ಹೇಳಿದ್ದಾರೆ.

ನಗರದ ಸರ್ಕಾರಿ ಪರಿವೀಕ್ಷಣಾಲಯದ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಪಾಸಾದ ಬಾಲ ಮಂದಿರದ ಮಕ್ಕಳಿಗೆ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಕ್ತಿಯ ಯಾವುದೇ ತರಹದ ಸಮಸ್ಯೆಗಳಿಗೆ ಉತ್ತಮ ಶಿಕ್ಷಣ ಮಾತ್ರ ಪರಿಹಾರ ನೀಡಬಲ್ಲದು. ಆದ್ದರಿಂದ ಮಕ್ಕಳು ಉತ್ತಮವಾಗಿ ಅಭ್ಯಾಸ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪೊಲೀಸ್ ಇಲಾಖೆಯ ಉಪ ಅಧೀಕ್ಷಕರಾದ ಶಾಂತವೀರ ಅವರು ಮಾತನಾಡಿ, ಪ್ರತಿಯೊಬ್ಬರಲ್ಲೂ ಒಂದಿಲ್ಲೊಂದು ಸಾಮಥ್ರ್ಯ ಇದ್ದೆ ಇರುತ್ತದೆ. ಕಷ್ಟಗಳು ಎದುರಾದಾಗ ಕುಗ್ಗಬಾರದು. ಧೈರ್ಯವಾಗಿ ಎದುರಿಸಿ ನಿಂತಾಗ ಮಾತ್ರ ಸಾಧನೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಮಂಗಳಾ ಹೆಗಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲ ಮಂದಿರದ ಮಕ್ಕಳ ಒಳಿತಿಗಾಗಿ ಮಕ್ಕಳ ಕಲ್ಯಾಣ ಸಮಿತಿಯು ಸದಾ ಸಿದ್ದವಿರುತ್ತದೆ. ಮಕ್ಕಳು ನಮ್ಮ ದೇಶದ ಆಸ್ತಿ. ಮಕ್ಕಳ ಪ್ರಗತಿಗಾಗಿ ಸಮಿತಿಯು ಯಾವಾಗಲೂ ಶ್ರಮಿಸುತ್ತದೆ ಎಂದು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅಮರೇಶ್ ಹಾವಿನ್ ಅವರು ಪ್ರಾಸ್ತಾವಿಕ ಮಾತನಾಡಿ, ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಸರ್ಕಾರವು ಅನೇಕ ಸೌಲತ್ತುಗಳನ್ನು ನೀಡಿದೆ. ಬಾಲ ಮಂದಿರಗಳು ಸಂಕಷ್ಟದಲ್ಲಿರುವ ಮಕ್ಕಳಿಗಾಗಿ ಕಾರ್ಯ ನಿರ್ವಹಿಸುತ್ತಿದ್ದು ಇಲ್ಲಿರುವ ಮಕ್ಕಳು ಅನೇಕ ಸಂಕಷ್ಟದ ಸನ್ನಿವೇಶಗಳಲ್ಲಿ ಇರುವವರಾಗಿದ್ದು, ಉತ್ತಮ ಅಧ್ಯಯನದ ಮೂಲಕ ಮುನ್ನಡೆಯಬೇಕು ಎಂದು ತಿಳಿಸಿದರು.

ಸ್ಟೇಷನ್ ಬಜಾರ್ ಪ್ರೌಢಶಾಲೆಯ ಮುಖ್ಯ ಗುರುಗಳಾದ ರಾಧಾ ದೇವಿ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಬಸವರಾಜ್ ಬ್ಯಾಗವಟ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಶ್ರೀಮತಿ ಶಾರದಾ ಪಾಟೀಲ್ ವಿವಿಧ ಸಂಸ್ಥೆಗಳ ಅಧೀಕ್ಷಕರು ಮತ್ತು ಸಿಬ್ಬಂದಿ ಭಾಗವಿಸಿದ್ದರು. ಬಾಲಕಿಯರ ಬಾಲ ಮಂದಿರದ ಅಧೀಕ್ಷಕರಾದ ಭಾರತಿ ನಾಯಕ್ ಸ್ವಾಗತಿಸಿದರು. ಬಾಲಕರ ಬಾಲ ಮಂದಿರದ ಅಧೀಕ್ಷಕರಾದ ನಾಗರಾಜ್ ನಾಯಕ್ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande