ರಾಯಚೂರು, 22 ಜುಲೈ (ಹಿ.ಸ.) :
ಆ್ಯಂಕರ್ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ ಹಾಗೂ ಸ್ಥಳೀಯ ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಜುಲೈ 30ರ ಬೆಳಿಗ್ಗೆ 10.30ಕ್ಕೆ ನಗರದ ಸ್ಟೇಷನ್ ರಸ್ತೆಯ ರಂಜಿತಾ ಪ್ಯಾಲೇಸ್ ನಲ್ಲಿ ಎಂ.ಎಸ್.ಎಂ.ಇ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು, ರಫ್ತು ಜಾಗೃತಿ ಹಾಗೂ ಲೀನ್ ಯೋಜನೆ ಮತ್ತು ಝಡ್ ಇ.ಡಿ. ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿರುವ ಆಸಕ್ತಿಯುಳ್ಳ ಎಂ.ಎಸ್.ಎಂ.ಇ. ಉದ್ದಿಮೆದಾರರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ರಾಯಚೂರು. ದೂರವಾಣಿ ಸಂಖ್ಯೆ: 8861241093ಗೆ ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಿಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್