ಮಾನಸಿಕ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ
ಧಾರವಾಡ, 22 ಜುಲೈ (ಹಿ.ಸ.) : ಆ್ಯಂಕರ್ : ದೇಶದಾದ್ಯಂತ ಪ್ರಾರಂಭವಾಗಿರುವ ಕೇಂದ್ರ ಸರಕಾರದ ಯೋಜನೆಯಾಗಿರುವ ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮ ಧಾರವಾಡ ಜಿಲ್ಲೆಯಲ್ಲಿಯೂ ಆರಂಭವಾಗಿದೆ. ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಪರಿಚಯಿಸಲಾಗುತ್ತಿದೆ. ರಾ
ಮಾನಸಿಕ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭ


ಧಾರವಾಡ, 22 ಜುಲೈ (ಹಿ.ಸ.) :

ಆ್ಯಂಕರ್ : ದೇಶದಾದ್ಯಂತ ಪ್ರಾರಂಭವಾಗಿರುವ ಕೇಂದ್ರ ಸರಕಾರದ ಯೋಜನೆಯಾಗಿರುವ ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮ ಧಾರವಾಡ ಜಿಲ್ಲೆಯಲ್ಲಿಯೂ ಆರಂಭವಾಗಿದೆ. ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಪರಿಚಯಿಸಲಾಗುತ್ತಿದೆ. ರಾಷ್ಟ್ರೀಯ ಟೆಲಿ ಮಾನಸಿ ಯೋಜನೆಯ ಉಚಿತ ಸಹಾಯವಾಣಿ ಸಂಖ್ಯೆ: 14416 ಅಥವಾ 18008914416 ಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ಆಸಕ್ತರು ಕರೆ ಮಾಡಬಹುದು.

ಟೆಲಿ-ಮನಸ್: ವ್ಯಥೆಗೆ ಒಳಪಟ್ಟವರು, ಪರೀಕ್ಷಾ ಒತ್ತಡಕ್ಕೊಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆ ಆಲೋಚನೆಗಳು, ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕಶಕ್ತಿ ತೊಂದರೆಯುಳ್ಳವರು, ಆರ್ಥಿಕ ಒತ್ತಡದಲ್ಲಿರುವವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಶುಲ್ಕರಹಿತ ದೂರವಾಣಿ ಸಂಖ್ಯೆ: 14416 ಅಥವಾ 18008914416 ಗೆ ಕರೆ ಮಾಡಬಹುದು ಎಂದು ಡಿಮ್ಹಾನ್ಸ್‍ನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande