ಬೆಂಗಳೂರು, 22 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿರುವ ಅರಣ್ಯ ಪ್ರದೇಶದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಕುರಿತು ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಬೆಳಸುತ್ತಿರುವ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.
ದೊಡ್ಡ ಸಂಖ್ಯೆಯ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa