ಎಸ್‌ಐಆರ್ ವಿರುದ್ಧ ಸಂಸತ್ ಆವರಣದಲ್ಲಿ ಪ್ರತಿ ಪಕ್ಷಗಳ ಪ್ರತಿಭಟನೆ
ನವದೆಹಲಿ, 22 ಜುಲೈ (ಹಿ.ಸ.) : ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ನವೀಕರಣ ಪ್ರಕ್ರಿಯೆ ವಿರುದ್ಧ ಮಂಗಳವಾರ ಸಂಸತ್ ಭವನದ ಮಕರ ದ್ವಾರದಲ್ಲಿ ಪ್ರತಿ ಪಕ್ಷಗಳು ಪ್ರತಿಭಟನೆ ನಡೆಸಿದವು. ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಆ
Protest


ನವದೆಹಲಿ, 22 ಜುಲೈ (ಹಿ.ಸ.) :

ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ನವೀಕರಣ ಪ್ರಕ್ರಿಯೆ ವಿರುದ್ಧ ಮಂಗಳವಾರ ಸಂಸತ್ ಭವನದ ಮಕರ ದ್ವಾರದಲ್ಲಿ ಪ್ರತಿ ಪಕ್ಷಗಳು ಪ್ರತಿಭಟನೆ ನಡೆಸಿದವು.

ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ, ಡಿಎಂಕೆ ಸೇರಿ ಹಲವು ಪಕ್ಷಗಳ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನಾಕಾರರು ಕೈಯಲ್ಲಿ ಪೋಸ್ಟರ್‌ಗಳನ್ನು ಹಿಡಿದು, ಎಸ್‌ಐಆರ್ ಭಾರತೀಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂಬ ಘೋಷಣೆಗಳನ್ನು ಹಾಕಿದರು.

ಬಿಹಾರ ವಿಧಾನ ಸಭಾ ಚುನಾವಣೆ ಮುಂದಿರುವುದನ್ನು ದೃಷ್ಟಿಯಿಂದ ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಷ್ಕರಣೆಗೆ ಎಸ್‌ಐಆರ್ ಪ್ರಕ್ರಿಯೆ ಕೈಗೊಂಡಿದ್ದು, ಇದುವರೆಗೆ ಶೇ. 90.67ರಷ್ಟು ಜನರು ಫಾರ್ಮ್ ಭರ್ತಿ ಮಾಡಿದ್ದಾರೆ. ಸೆಪ್ಟೆಂಬರ್ 30ರ ಒಳಗೆ ಕರಡು ಹಾಗೂ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande