ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ
ಶಿವಮೊಗ್ಗ, 22 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟೀಯ ಆರೋಗ್ಯ ಅಭಿಯಾನ ಎನ್‌ಹೆಚ್‌ಎಂ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳ ರೋಸ್ಟರ್ ಕಂ ಮೇರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿವಮ
ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಆಹ್ವಾನ


ಶಿವಮೊಗ್ಗ, 22 ಜುಲೈ (ಹಿ.ಸ.) :

ಆ್ಯಂಕರ್ : ರಾಷ್ಟೀಯ ಆರೋಗ್ಯ ಅಭಿಯಾನ ಎನ್‌ಹೆಚ್‌ಎಂ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳ ರೋಸ್ಟರ್ ಕಂ ಮೇರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳ ಆಕ್ಷೇಪಣೆ ಇದ್ದಲ್ಲಿ ಲಿಖಿತ ರೂಪದಲ್ಲಿ ಜು.28 ರೊಳಗಾಗಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಎನ್.ಹೆಚ್.ಎಂ. ವಿಭಾಗಕ್ಕೆ ಸಲ್ಲಿಸುವಂತೆ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande