ಆರ್‌ಎಸ್‌ಎಸ್ ಶತಮಾನೋತ್ಸವ : ಚರ್ಚೆಯಲ್ಲಿ ಡಾ. ಮೋಹನ್ ಭಾಗವತ್
ನವದೆಹಲಿ, 22 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ವರ್ಷದ ಅಂಗವಾಗಿ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ಆಗಸ್ಟ್ 26 ರಿಂದ 28 ರವರೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ದೆಹಲಿಯ
Rss


ನವದೆಹಲಿ, 22 ಜುಲೈ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ವರ್ಷದ ಅಂಗವಾಗಿ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ಆಗಸ್ಟ್ 26 ರಿಂದ 28 ರವರೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ದೆಹಲಿಯ ಪ್ರಾಂತೀಯ ಸಂಘಚಾಲಕ ಡಾ. ಅನಿಲ್ ಅಗರ್ವಾಲ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಪ್ರತಿದಿನ ಸಂಜೆ 5.30ರಿಂದ 7.30ರ ವರೆಗೆ ಸಂಘದ ಪ್ರಮುಖರು ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ದೇಶ ಮತ್ತು ವಿದೇಶಗಳ ಗಣ್ಯರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಅವರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ 2017ರ ಸೆಪ್ಟೆಂಬರ್ 16ರಿಂದ 18ರವರೆಗೆ ಇದೇ ವಿಜ್ಞಾನ ಭವನದಲ್ಲಿ ಡಾ. ಭಾಗವತ್ ಅವರು ಮೂರು ದಿನಗಳ ಚರ್ಚೆಯಲ್ಲಿ ಭಾಗವಹಿಸಿದ್ದು. ಆಗ ದೇಶದ ವಿವಿಧ ರಾಜಕೀಯ ಪಕ್ಷಗಳು, ಚಲನಚಿತ್ರ ಕ್ಷೇತ್ರದ ಪ್ರಮುಖರು ಹಾಗೂ 60 ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರು ಭಾಗವಹಿಸಿದ್ದರು.

ಈ ಚರ್ಚಾ ಮಾಲಿಕೆ ಆರ್‌ಎಸ್‌ಎಸ್ ಸ್ಥಾಪನೆಯ 100ನೇ ವರ್ಷದ ಪ್ರಯುಕ್ತ ನಡೆಯುತ್ತಿರುವ ಪ್ರಮುಖ ಕಾರ್ಯಕ್ರಮವಾಗಿದೆ. ಶತಮಾನೋತ್ಸವದ ಅಂಗವಾಗಿ ಮುಂಬೈ, ಕೋಲ್ಕತ್ತಾ ಮತ್ತು ಬೆಂಗಳೂರು ನಗರಗಳಲ್ಲಿಯೂ ಇಂಥ ಚರ್ಚೆಗಳು ನಡೆಯಲಿವೆ. ಅಲ್ಲದೇ ದೇಶದಾದ್ಯಂತ 1500 ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಮ್ಮೇಳನಗಳನ್ನು ಆಯೋಜಿಸುವುದಾಗಿ ಸಂಘ ಘೋಷಿಸಿದೆ.

ಸಂಘದ ಕಾರ್ಯಪದ್ಧತಿ ಮತ್ತು ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ಮನೆ ಮನೆ ಸಂಪರ್ಕ ಹಾಗೂ ಸಂಘ ಸಾಹಿತ್ಯ ವಿತರಣೆಯ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸಲಾಗುತ್ತಿದೆ. ಈ ಶತಮಾನೋತ್ಸವ ವರ್ಷದ ಮೂಲಕ ದೇಶದ ಪ್ರತಿ ಹಳ್ಳಿಯೊಂದಿಗೆ ನಿಕಟ ಸಂಪರ್ಕ ಸ್ಥಾಪನೆಗೂ ಸಂಘ ಮುಂದಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande