ನವದೆಹಲಿ, 22 ಜುಲೈ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಗೆ ಮಂಜೂರಾಗಿರುವ ಜಾಮೀನು ರದ್ದು ಕೋರಿ ಬೆಂಗಳೂರು ಪೋಲಿಸರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.
ನಟ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಗೈರಾಗಿರುವ ಹಿನ್ನೆಲೆಯಲ್ಲಿ, ವಾದ ಮಂಡನೆಗೆ ಕಾಲಾವಕಾಶ ಕೋರಲಾಗಿದೆ. ಹೀಗಾಗಿ, ನಟನ ಪರ ವಕೀಲ ಸಿದ್ಧಾರ್ಥ್ ದವೆ ಗುರುವಾರ ವಾದ ಮಂಡಿಸಲಿದ್ದಾರೆ.
ಪೀಠವು, 75% ಲಿಖಿತ ರೂಪದಲ್ಲಿ ವಾದಗಳನ್ನು ಸಲ್ಲಿಸಲು ಸೂಚನೆ ನೀಡಿದ್ದು, ಕೆಲ ಕಾಲ ಮಾತ್ರ ವಾದ ಮಂಡನೆಗೆ ಅವಕಾಶ ನೀಡುವುದಾಗಿ ತಿಳಿಸಿದೆ.
ಇದಕ್ಕೂ ಮೊದಲು, ಕರ್ನಾಟಕ ಉಚ್ಚ ನ್ಯಾಯಾಲಯ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ ತೀರ್ಪಿನ ಮೇಲೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ಮುಂದಿನ ವಿಚಾರಣೆ ಜುಲೈ 25, ಗುರುವಾರಕ್ಕೆ ನಿಗದಿಯಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa