ರಾಯಚೂರು, 22 ಜುಲೈ (ಹಿ.ಸ.) :
ಆ್ಯಂಕರ್ : ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ರಾಯಚೂರ ವಾರ್ತಾ ಇಲಾಖೆಯು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಕೆಗೆ ಜುಲೈ 24 ಕೊನೆಯ ದಿನವಾಗಿದೆ. ರಾಯಚೂರು ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, 1ನೇ ಮಹಡಿ, ಪತ್ರಿಕಾಭವನ, ರಂಗಮಂದಿರ ಹಿಂಭಾಗ, ರಾಯಚೂರು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9743892080, 9035063156ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್