ತುಮಕೂರು, 22 ಜುಲೈ (ಹಿ.ಸ.) :
ಆ್ಯಂಕರ್ : ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ರಸ್ತೆ ಬದಿ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ರಂಗಶಾಮಯ್ಯ ಮತ್ತು ಬೈಲಪ್ಪ ಎಂದು ಗುರುತಿಸಲಾಗಿದೆ. ಕೋಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಗಡಿಗೆ ನುಗ್ಗಿದ ಲಾರಿ ಸಂಪೂರ್ಣ ಹಳೆಯದಾಗಿದ್ದು, ಚಾಲಕನ ಬೇಜವಾಬ್ದಾರಿತನವೇ ಇದಕ್ಕೆ ಕಾರಣ ಎಂದು ಸ್ಥಳಿಯರು ಆರೋಪಿಸಿದ್ದಾರೆ.
ರಸ್ತೆ ಮಧ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ಗ್ರಾಮದ ರಸ್ತೆಗಳಲ್ಲಿ ರಸ್ತೆ ತಡೆಗಳನತ ಹಾಕದೇ ಇರುವುದು ಕೂಡ ಅಪಘಾತಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa