ಗದಗ, 23 ಜುಲೈ (ಹಿ.ಸ.) :
ಆ್ಯಂಕರ್ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟçಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಚರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 15.00ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು.
ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್‌ಸೈಟ್ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿರುತ್ತದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಅಥವಾ ಜಿಲ್ಲಾ ಕಚೇರಿ ದೂರವಾಣಿ 08372-232327 ಸಂಪರ್ಕಿಸಬಹುದು. ಸೇವಾಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / Lalita M P