ಬಳ್ಳಾರಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಚ್ಚುಕಟ್ಟಾಗಿ ಆಯೋಜಿಸಿ : ಡಿಸಿ
ಬಳ್ಳಾರಿ, 23 ಜುಲೈ (ಹಿ.ಸ.) : ಆ್ಯಂಕರ್ : ಆಗಸ್ಟ್ 15 ರಂದು ಆಚರಿಸಲ್ಪಡುವ 79 ನೇ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾ ಕೇಂದ್ರದಲ್ಲಿ ಅಚ್ಚುಕಟ್ಟಾಗಿ ಸಿದ್ದತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರ
ಬಳ್ಳಾರಿ : 79 ನೇ ಸ್ವಾತಂತ್ರ್ಯ ದಿನಾಚರಣೆ : ಅಚ್ಚುಕಟ್ಟಾಗಿ ಆಯೋಜಿಸಿ: ಡಿಸಿ


ಬಳ್ಳಾರಿ : 79 ನೇ ಸ್ವಾತಂತ್ರ್ಯ ದಿನಾಚರಣೆ : ಅಚ್ಚುಕಟ್ಟಾಗಿ ಆಯೋಜಿಸಿ: ಡಿಸಿ


ಬಳ್ಳಾರಿ : 79 ನೇ ಸ್ವಾತಂತ್ರ್ಯ ದಿನಾಚರಣೆ : ಅಚ್ಚುಕಟ್ಟಾಗಿ ಆಯೋಜಿಸಿ: ಡಿಸಿ


ಬಳ್ಳಾರಿ, 23 ಜುಲೈ (ಹಿ.ಸ.) :

ಆ್ಯಂಕರ್ : ಆಗಸ್ಟ್ 15 ರಂದು ಆಚರಿಸಲ್ಪಡುವ 79 ನೇ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾ ಕೇಂದ್ರದಲ್ಲಿ ಅಚ್ಚುಕಟ್ಟಾಗಿ ಸಿದ್ದತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಕೇಂದ್ರದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಕೃಷ್ಣೇ ಬೈರೇಗೌಡ ಅವರು ಧ್ವಜಾರೋಹಣ ನೆರವೇರಿಸಿ, ಧ್ವಜಾರೋಹಣದ ಸಂದೇಶ ನೀಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿಯ ಮಾಹಿತಿ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕಾರ್ಯದ ಪೂರ್ಣ ಮಾಹಿತಿ ಲಭ್ಯತೆಯಲ್ಲಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 08 ಕ್ಕೆ ನಗರದ ಡಾ. ರಾಜ್‍ಕುಮಾರ್ ಉದ್ಯಾನವನದ ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಪುಷ್ಪಾರ್ಚನೆ, 8.15 ಕ್ಕೆ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿ ಬೃಹತ್ ಸ್ಥಂಬದಲ್ಲಿ ಧ್ವಜಾರೋಹಣಾ, 8.30 ಕ್ಕೆ ಬಿಎಂಸಿಆರ್‍ಸಿ ಬಳಿಯ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಪುಷ್ಪನಮನ, 8.45 ಕ್ಕೆ ಬಿಎಂಸಿಆರ್‍ಸಿ ಮೈದಾನದಲ್ಲಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ, ತುಕಡಿಗಳಿಂದ ಪರೇಡ್ ವೀಕ್ಷಣೆಯ ಬಳಿಕ 09 ಗಂಟೆಗೆ ಧ್ವಜಾರೋಹಣಾ ನೆರವೇರಿಸಿ ಸಂದೇಶ ನೀಡುವರು ಎಂದು ತಿಳಿಸಿದರು.

ಪರೇಡ್ ಆಯೋಜನೆಗೆ ಸಂಬಂಧಿಸಿದಂತೆ ಅಗತ್ಯ ತಕ್ಕಂತೆ ಶಾಲಾ ತಂಡಗಳನ್ನು ಆಯ್ದುಕೊಂಡು ಪೂರ್ವ ತಯಾರಿ ನಡೆಸಬೇಕು. ವಿದ್ಯಾರ್ಥಿಗಳ ತಂಡಗಳಿಗೆ ಲಘು ಉಪಹಾರ, ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು ಎಂದರು.

ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲು ಅರ್ಹರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಬೇಕು. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಕಾರ್ಯಕ್ರಮದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿರಬೇಕು. ಅಡಚಣೆ ಉಂಟಾದಲ್ಲಿ ಪರ್ಯಾಯ ವ್ಯವಸ್ಥೆಯ ಸಿದ್ಧತೆ ಇರಬೇಕು ಎಂದರು.

ಅದೇ ದಿನ ಸಂಜೆ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

*ಕಡ್ಡಾಯವಾಗಿ ಪಾಲ್ಗೊಳ್ಳಿ:*

ರಾಷ್ಟ್ರೀಯ ಹಬ್ಬಗಳಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗವಹಿಸಬೇಕು. ಈ ಕುರಿತು ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳಿಗೆ ಆದೇಶ ಹೊರಡಿಸಲಾಗುವುದು ಎಂದರಲ್ಲದೇ, ಅಧಿಕಾರಿಗಳು ತಮ್ಮ-ತಮ್ಮ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು. ಅದೇರೀತಿಯಾಗಿ ನಗರದ ಮುಖ್ಯ ವೃತ್ತಗಳನ್ನು ಸಹ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಸಹಾಯಕ ಆಯುಕ್ತ ಪ್ರಮೋದ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande