ಬಳ್ಳಾರಿ ನಗರ ಅಂಗನವಾಡಿ ನೇಮಕಾತಿ : ಆಕ್ಷೇಪಣೆ ಆಹ್ವಾನ
ಬಳ್ಳಾರಿ, 23 ಜುಲೈ (ಹಿ.ಸ.) : ಆ್ಯಂಕರ್ : ಬಳ್ಳಾರಿ (ನಗರ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 15 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಪಟ್ಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 8ರೊಳಗಾಗಿ ಸಲ್ಲಿಸಲು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೋರಿದ್ದಾರೆ. ತಾ
ಬಳ್ಳಾರಿ ನಗರ ಅಂಗನವಾಡಿ ನೇಮಕಾತಿ : ಆಕ್ಷೇಪಣೆ ಆಹ್ವಾನ


ಬಳ್ಳಾರಿ, 23 ಜುಲೈ (ಹಿ.ಸ.) :

ಆ್ಯಂಕರ್ : ಬಳ್ಳಾರಿ (ನಗರ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 15 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಪಟ್ಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 8ರೊಳಗಾಗಿ ಸಲ್ಲಿಸಲು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೋರಿದ್ದಾರೆ.

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಹಶೀಲ್ದಾರರ ಕಚೇರಿ, ತಾಲ್ಲೂಕು ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಆ.08 ಕೊನೆಯ ದಿನ. ಆಕ್ಷೇಪಣೆಗಳನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.08392-268609 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande