ಬಳ್ಳಾರಿ ಗ್ರಾಮೀಣ : ಅಂಗನವಾಡಿ ಆಯ್ಕೆ ; ಆಕ್ಷೇಪಣೆಗಳಿಗೆ ಆಹ್ವಾನ
ಬಳ್ಳಾರಿ, 23 ಜುಲೈ (ಹಿ.ಸ.) : ಆ್ಯಂಕರ್ : ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ತಾತ್ಕಾಲಿಕವಾಗಿ ಆಯ್ಕೆಗೊಂಡ 01 ಅಂಗನವಾಡಿ ಕಾರ್ಯಕರ್ತೆ ಮತ್ತು 05 ಅಂಗನವಾಡಿ ಸಹಾಯಕಿಯರ ಹುದ್ದೆಗಳ 2ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್
ಬಳ್ಳಾರಿ ಗ್ರಾಮೀಣ : ಅಂಗನವಾಡಿ ಆಯ್ಕೆ ; ಆಕ್ಷೇಪಣೆಗಳಿಗೆ ಆಹ್ವಾನ


ಬಳ್ಳಾರಿ, 23 ಜುಲೈ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ತಾತ್ಕಾಲಿಕವಾಗಿ ಆಯ್ಕೆಗೊಂಡ 01 ಅಂಗನವಾಡಿ ಕಾರ್ಯಕರ್ತೆ ಮತ್ತು 05 ಅಂಗನವಾಡಿ ಸಹಾಯಕಿಯರ ಹುದ್ದೆಗಳ 2ನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು. ಆಗಸ್ಟ್ 08 ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ. ಆಕ್ಷೇಪಣೆಗಳನ್ನು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.08392-266080 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande