ದೆಹಲಿ-ಎನ್‌ಸಿಆರ್‌ನಲ್ಲಿ ಭಾರಿ ಮಳೆ
ನವದೆಹಲಿ, 23 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರ ರಾಜಧಾನಿ ದೆಹಲಿ-ಎನ್‌ಸಿಆರ್‌ನಲ್ಲಿ ಇಂದು ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ಮಳೆ ಕಾರಣದಿಂದ ಹಲವೆಡೆ ರಸ್ತೆಯಲ್ಲಿ ನೀರು ನಿಂತು ಸಂಚಾರ ದಟ್ಟಣೆ ಉಂಟಾಗಿದೆ. ರಸ್ತೆಗಳು ಜಲಾವೃತವಾಗಿದ್ದು ವಾಹನಗಳ ಸಂಚಾರ ನಿಧಾನಗೊಂಡಿದ್ದು, ಜನತೆ ಪ್ರಯಾಣದಲ್
ದೆಹಲಿ-ಎನ್‌ಸಿಆರ್‌ನಲ್ಲಿ ಭಾರಿ ಮಳೆ


ನವದೆಹಲಿ, 23 ಜುಲೈ (ಹಿ.ಸ.) :

ಆ್ಯಂಕರ್ : ರಾಷ್ಟ್ರ ರಾಜಧಾನಿ ದೆಹಲಿ-ಎನ್‌ಸಿಆರ್‌ನಲ್ಲಿ ಇಂದು ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ಮಳೆ ಕಾರಣದಿಂದ ಹಲವೆಡೆ ರಸ್ತೆಯಲ್ಲಿ ನೀರು ನಿಂತು ಸಂಚಾರ ದಟ್ಟಣೆ ಉಂಟಾಗಿದೆ.

ರಸ್ತೆಗಳು ಜಲಾವೃತವಾಗಿದ್ದು ವಾಹನಗಳ ಸಂಚಾರ ನಿಧಾನಗೊಂಡಿದ್ದು, ಜನತೆ ಪ್ರಯಾಣದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ಮುಖ್ಯ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ಇನ್ನೂ ಕೆಲ ಗಂಟೆಗಳವರೆಗೆ ಮಳೆಯು ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರಿಗೆ ಅಗತ್ಯ ಮುಂಜಾಗ್ರತೆ ವಹಿಸಲು ಮತ್ತು ಅನವಶ್ಯಕ ಪ್ರಯಾಣ ಕೈ ಬಿಡುವಂತೆ ಸಲಹೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande