ಬೆಂಗಳೂರು, 23 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಕಂಡುಬರುತ್ತಿದೆ. ಇಂದು ಸಹ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಒಂದು ವಾರ ರಾಜ್ಯದ ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಒಳನಾಡಿನ ಕೆಲ ಭಾಗಗಳಲ್ಲಿ ಸ್ಥಳೀಯವಾಗಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಂಭವವಿದೆ. ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಿಕೊಳ್ಳಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa