ಬೆಂಗಳೂರಲ್ಲಿ ಉದ್ಯೋಗ : ಶುಕ್ರವಾರ ನೇರ ಸಂದರ್ಶನ
ಬಳ್ಳಾರಿ, 23 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ವೇರ್ ಹೌಸ್ ಆಸೋಸಿಯೇಟ್‍ನ ಎಸ್‍ಕೆ ಸೇಪ್ಟಿ ವಿಂಗ್ಸ್ ಪ್ರೈವೇಟ್ ಲಿಮಿಟೆಡ್‍ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜುಲೈ 25ರ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನ
ಬೆಂಗಳೂರಲ್ಲಿ ಉದ್ಯೋಗ : ಶುಕ್ರವಾರ ನೇರ ಸಂದರ್ಶನ


ಬಳ್ಳಾರಿ, 23 ಜುಲೈ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ವೇರ್ ಹೌಸ್ ಆಸೋಸಿಯೇಟ್‍ನ ಎಸ್‍ಕೆ ಸೇಪ್ಟಿ ವಿಂಗ್ಸ್ ಪ್ರೈವೇಟ್ ಲಿಮಿಟೆಡ್‍ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜುಲೈ 25ರ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಈ ಕುರಿತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ.

*ವಿದ್ಯಾರ್ಹತೆ:*

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande