ತಂತ್ರಜ್ಞಾನದ ಪ್ರಭಾವ ನಿರ್ಣಯ ಅಗತ್ಯ : ಮೋಹನ್ ಭಾಗವತ್
ನವದೆಹಲಿ, 23 ಜುಲೈ (ಹಿ.ಸ.) : ಆ್ಯಂಕರ್ : ತಂತ್ರಜ್ಞಾನದ ವೇಗದ ಬೆಳವಣಿಗೆ ಸಮಾಜ ಹಾಗೂ ಕಾರ್ಮಿಕ ಮಾರುಕಟ್ಟೆಯ ಮೇಲೆ ಬಹುಪಾಲು ಪ್ರಭಾವ ಬೀರುತ್ತಿದೆ. ಈ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನದ ಪರಿಣಾಮವನ್ನು ಸೂಕ್ತವಾಗಿ ನಿರ್ಣಯಿಸುವುದು ಅತ್ಯವಶ್ಯಕವಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್
Bms


ನವದೆಹಲಿ, 23 ಜುಲೈ (ಹಿ.ಸ.) :

ಆ್ಯಂಕರ್ : ತಂತ್ರಜ್ಞಾನದ ವೇಗದ ಬೆಳವಣಿಗೆ ಸಮಾಜ ಹಾಗೂ ಕಾರ್ಮಿಕ ಮಾರುಕಟ್ಟೆಯ ಮೇಲೆ ಬಹುಪಾಲು ಪ್ರಭಾವ ಬೀರುತ್ತಿದೆ. ಈ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನದ ಪರಿಣಾಮವನ್ನು ಸೂಕ್ತವಾಗಿ ನಿರ್ಣಯಿಸುವುದು ಅತ್ಯವಶ್ಯಕವಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಹೇಳಿದರು.

ದೆಹಲಿಯಲ್ಲಿ ನಡೆದ ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) 70ನೇ ಸ್ಥಾಪನಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿ, “ತಂತ್ರಜ್ಞಾನ ಮಾನವ ಸ್ವಭಾವವನ್ನು ಅಸಭ್ಯಗೊಳಿಸುತ್ತಿದೆ. ಶ್ರಮದ ಗೌರವವನ್ನು ಕುಗ್ಗಿಸುತ್ತಿದೆ. ಕಾರ್ಮಿಕರ ನೋವು ಸಮಾಜದ ನೋವಾಗಿದೆ. ಇದನ್ನು ಮನಗಂಡು ತಂತ್ರಜ್ಞಾನ ಬಳಕೆ ಬಗ್ಗೆ ಸಮರ್ಥ ಚಿಂತನೆ ಅಗತ್ಯ” ಎಂದರು.

ಬಿಎಂಎಸ್ ಅನ್ನು ಬಲಿಷ್ಠಗೊಳಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಬದಲಾಗುತ್ತಿರುವ ಜಾಗತಿಕ ಪರಿಸ್ಥಿತಿಯೊಂದಿಗೆ ಸಂಘದ ಚಟುವಟಿಕೆಗಳನ್ನು ಕೂಡಾ ವಿಸ್ತರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮಾತನಾಡಿ ಭಾರತೀಯ ಮಜ್ದೂರ್ ಸಂಘವು ದೇಶೀಯ ಶೈಲಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶಿಷ್ಟ ಸಂಸ್ಥೆ. ಇದು ಭಾರತೀಯ ಸಂಸ್ಕೃತಿ ಹಾಗೂ ಜೀವನಮೌಲ್ಯಗಳನ್ನು ಆಧರಿಸಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande