ಕೊಪ್ಪಳ, 23 ಜುಲೈ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿಗೆ ಖಾದ್ಯ ತೈಲ ಅಭಿಯಾನದ ಎಣ್ಣೆಕಾಳು ಯೋಜನೆಯಡಿ ಎಣ್ಣೆಕಾಳು ಕೊಯ್ಲೋತ್ತರ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳಿ0ದ ವಿಸ್ತೃತ ಯೋಜನಾ ವರದಿಯೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ.
ಖಾದ್ಯ ತೈಲ ಅಭಿಯಾನದ ಎಣ್ಣೆಕಾಳು ಯೋಜನೆಯಡಿ ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲು ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಎಣ್ಣೆಕಾಳು ಕೊಯ್ಲೋತ್ತರ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳು ವಿಸ್ತೃತ ಯೋಜನಾ ವರದಿಯೊಂದಿಗೆ ಅರ್ಜಿ ಸಲ್ಲಿಸಬಹುದು. ಯೋಜನಾ ವರದಿಯ ಶೇ.33 ರಷ್ಟು ಅಥವಾ 9.99 ಲಕ್ಷ ರೂ. ಮೀರದಂತೆ ಸಹಾಯಧನ ಒದಗಿಸಲಾಗುವುದು. ಈ ಘಟಕದಲ್ಲಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆ ಪರಿಗಣಿಸಲಾಗುವುದಿಲ್ಲ.
ಆಸಕ್ತರು ತಮಗೆ ಸಂಬ0ಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಆಗಸ್ಟ್ 05 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲಿಸಿ ಅರ್ಹ ಫಲಾನುಭವಿಯನ್ನು ಕಾರ್ಯಕಾರಿ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್