ಬೆಂಗಳೂರು, 23 ಜುಲೈ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು.
ತನಿಖಾಧಿಕಾರಿ ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ ನಡೆದ ಈ ವಿಚಾರಣೆಯಲ್ಲಿ, ಶಾಸಕರು ತನಿಖೆಗೆ ಸಹಕರಿಸಿದರು. ಇನ್ನೊಂದೆಡೆ, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯಾದ ಆಟೋ ಚಾಲಕ ಶಿವು ಎಂಬಾತನನ್ನು ಬಂಧಿಸಲಾಗಿದೆ. ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ವಿಚಾರಣೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, ನಾನು ತನಿಖಾಧಿಕಾರಿಗಳ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮುಂದಿನ ವಿಚಾರಣೆಗೆ ನೋಟಿಸ್ ನೀಡಲಾಗಿದೆ. ನ್ಯಾಯಾಲಯದ ಪ್ರತಿಯೊಂದು ಪ್ರಕ್ರಿಯೆಗೂ ನಾನು ಹಾಜರಾಗಲು ಸಿದ್ಧನಿದ್ದೇನೆ, ಎಂದು ಸ್ಪಷ್ಟಪಡಿಸಿದರು.
ಕೊಲೆಯಾದ ಶಿವಪ್ರಕಾಶ್ ಅಥವಾ ಜಮೀನಿಗೆ ಸಂಬಂಧಿಸಿದ ಯಾವುದೇ ವಿಷಯವನ್ನೂ ನಾನು ತಿಳಿದಿಲ್ಲ. ನನ್ನ ಮೇಲೆ ಆಗುತ್ತಿರುವ ಆರೋಪಗಳು ರಾಜಕೀಯ ಪ್ರೇರಿತವಾಗಿವೆ. ನನ್ನನ್ನು ದುರುದ್ದೇಶಪೂರ್ವಕವಾಗಿ ಈ ಪ್ರಕರಣದಲ್ಲಿ ಸಿಲುಕಿಸುವ ಯತ್ನ ನಡೆಯುತ್ತಿದೆ, ಎಂದು ಶಾಸಕರು ಆರೋಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa